Skip to main content


ಸಿಎಂಗೆ ‘ಬದಾಮಿ’ ಸವಿಯಾಗದಂತೆ ಬಿಜೆಪಿ ಮಾಸ್ಟರ್ ಪ್ಲಾನ್ – ಸಿಎಂ ವಿರುದ್ಧ ರಾಮುಲು ಕಣಕ್ಕೆ!

ಸಿಎಂ ಸಿದ್ದರಾಮಯ್ಯ ಎಲ್ಲೇ ಸ್ಪರ್ಧೆಗೆ ನಿಂತರೂ ಪ್ರಬಲ ಅಭ್ಯರ್ಥಿಯನ್ನೇ ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ. ಸಿಎಂ ಸಿದ್ದರಾಮಯ್ಯ ಬದಾಮಿಯಲ್ಲಿ ಸ್ಪರ್ಧೆಗೆ ನಿಂತರೆ ಯಾರನ್ನು ಕಣಕ್ಕಿಳಿಸಬೇಕು ಎಂದು ಬಿಜೆಪಿ ಮಾಸ್ಟರ್ ಪ್ಲ್ಯಾನ್ ರೂಪಿಸಿದೆ. ಬದಾಮಿಯಲ್ಲಿ ಸಿದ್ದರಾಮಯ್ಯ ಕಟ್ಟಿ ಹಾಕಲು ಬಿಜೆಪಿ ಶ್ರೀರಾಮುಲು ಅವರನ್ನು ಸ್ಪರ್ಧೆಗೆ ಸಿದ್ಧವಾಗಿರುವಂತೆ ಸೂಚಿಸಿದೆ. ಬಿಜೆಪಿಯಿಂದ ಶ್ರೀರಾಮುಲು ಅವರನ್ನು ಕಣಕ್ಕಿಳಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯ ನಾಯಕರಿಗೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಬಿಜೆಪಿ ಉನ್ನತ ಮೂಲಗಳಿಂದ ‘ ಲಭ್ಯವಾಗಿದೆ.    

short by NP / read more at Public TV

Comments