Skip to main content


ಅಪ್ರಾಪ್ತರ ಮೇಲಿನ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸುವ ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ

12 ವರ್ಷದವರೆಗಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವ ಅಪರಾಧಿಗಳನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಸ್ಕೋ) ಕಾಯ್ದೆಯಡಿ ಬಂಧಿಸಿ ಮರಣದಂಡನೆ ಜಾರಿಗೊಳಿಸಲು ಅವಕಾಶ ನೀಡುವ ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. ಉನ್ನಾವೊ, ಕಥುವಾ ಅತ್ಯಾಚಾರ ಪ್ರಕರಣಗಳಲ್ಲಿ ದೇಶಾದ್ಯಂತ ತೀವ್ರವಾದ ಪ್ರತಿಭಟನೆಗಳು ಎದುರಾದ ಬೆನ್ನಲ್ಲೆ ಬಹುನಿರೀಕ್ಷಿತ ಸುಗ್ರೀವಾಜ್ಞೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಅಧಿಕೃತ ಮೂಲಗಳ ಪ್ರಕಾರ ಪೋಸ್ಕೋ ಕಾಯ್ದೆಯಲ್ಲಿ ಬದಲಾವಣೆಯಾಗಲಿದ್ದು, ಮಕ್ಕಳ ಮೇಲೆ ಅತ್ಯಾಚಾರ ನಡೆಸುವ ಅಪರಾಧಿಗಳಿಗೆ ಮರಣದಂಡನೆ ವಿಧಿಸಲಾಗುತ್ತದೆ.   

short by Pawan / read more at Kannada Prabha

Comments