Skip to main content


ಕೋಲಾರ: ಬಿಜೆಪಿ ಅಭ್ಯರ್ಥಿ ಕಾರಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಚುನಾವಣೆ ವೇಳೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದು, ಕೋಲಾರದ ಬಿಜೆಪಿ ಅಭ್ಯರ್ಥಿ ಓಂ ಶಕ್ತಿ ಛಲಪತಿ ಅವರ ಕಾರಿಗೆ ಬೆಂಕಿ ಹಚ್ಚಲಾಗಿದೆ. ಮಂಗಳವಾರ ನಸುಕಿನ 3 ಗಂಟೆಯ ವೇಳೆಗೆ ಛಲಪತಿ ಅವರ ಇನ್ನೋವಾ ಕಾರಿಗೆ ಬೆಂಕಿ ಹಚ್ಚಲಾಗಿದ್ದು, ಕಾರು ಸಂಪೂರ್ಣವಾಗಿ ಸುಟ್ಟುಹೋಗಿದೆ. ಕೋಲಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

short by Shraman / more at KannadaNewNow 


Comments