Skip to main content


ಕಾಂಗ್ರೆಸ್‌ ಟಿಕೆಟ್‌: ಮುಗಿಯದ ಕಸರತ್ತು

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಪರಿಶೀಲನಾ ಸಮಿತಿ ಮುಖಂಡರು ಪಕ್ಷದ ರಾಜ್ಯ ಮುಖಂಡರೊಂದಿಗೆ ಇಲ್ಲಿ ಸೋಮವಾರ ತಡರಾತ್ರಿಯವರೆಗೆ ಸುದೀರ್ಘ ಚರ್ಚೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್‌, ಕಾರ್ಯಾಧ್ಯಕ್ಷರಾದ ಎಸ್‌.ಆರ್‌. ಪಾಟೀಲ, ದಿನೇಶ್‌ ಗುಂಡೂರಾವ್‌, ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌, ಎಐಸಿಸಿ ಕಾರ್ಯದರ್ಶಿ ಸತೀಶ ಜಾರಕಿಹೊಳಿ, ಮುಖಂಡರಾದ ಡಿ.ಕೆ. ಶಿವಕುಮಾರ್‌, ಆರ್‌.ವಿ.ದೇಶಪಾಂಡೆ, ಕೆ.ಎಚ್‌. ಮುನಿಯಪ್ಪ, ಎನ್‌.ಚಂದ್ರಪ್ಪ, ಬಿ.ಕೆ. ಹರಿಪ್ರಸಾದ್‌ ಮತ್ತಿತರರೊಂದಿಗೆ ಪರಿಶೀಲನಾ ಸಮಿತಿ ಮುಖ್ಯಸ್ಥ ಮಧುಸೂದನ ಮಿಸ್ತ್ರಿ ಎರಡು ಸುತ್ತಿನ ಸಭೆ ನಡೆಸಿದರು.        

short by NP / read more at Prajavani

Comments