Skip to main content


ರಾಜ್ಯದ ಹಲವೆಡೆ ಭಾರೀ ಮಳೆ- ಸಿಡಿಲಿಗೆ ಇಬ್ಬರು ಬಲಿ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ನಗರ ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದ್ದು, ಚಿಕ್ಕಬಳ್ಳಾಪುರದಲ್ಲಿ ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ರಾಮನೊಡ್ಡಂಪಲ್ಲಿ ಗ್ರಾಮದ ಸದಾಶಿವ (48) ಜಿ.ನರಸಿಂಹಪ್ಪ (68) ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಗುಡುಗು ಮಿಂಚುವಿನಿಂದ ಪಾರಾಗಲು ಕೆರೆ ಏರಿ ಮೇಲಿನ ದೇಗುಲದ ಬೇವಿನ ಮರದ ಕೆಳಗೆ ಆಶ್ರಯ ಪಡೆದಿದ್ದಾಗ ಸಿಡಿಲು ಹೊಡೆದಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಸ್ಥಳಕ್ಕೆ ಬಾಗೇಪಲ್ಲಿ ತಹಶೀಲ್ದಾರ್ ಮಹಮದ್ ಅಸ್ಲಾಂ ಭೇಟಿ ನೀಡಿ ತಲಾ 4 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಬಾಗೇಪಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.    

short by NP / read more at Public TV

Comments