Skip to main content


ನಿಮ್ಮ ಕುಟುಂಬದ ಜವಾಬ್ದಾರಿ ನಮಗೆ ಬಿಡಿ: ಪೌರಕಾರ್ಮಿಕರಿಗೆ ರಾಹುಲ್ ಗಾಂಧಿ ಅಭಯ

 ‘ನಿಮ್ಮ ಕುಟುಂಬದ ಜವಾಬ್ದಾರಿಯನ್ನು ನಮಗೆ ಬಿಡಿ’ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪೌರಕಾರ್ಮಿಕರಿಗೆ ಅಭಯ ನೀಡಿದರು. ನಗರದ ಜಕ್ಕರಾಯನಕೆರೆ ಮೈದಾನದಲ್ಲಿ ಪೌರಕಾರ್ಮಿಕರ ಜತೆ ಸಂವಾದ ನಡೆಸಿದ ಅವರು, ‘ಪೌರ ಕಾರ್ಮಿಕರ ಸಮಸ್ಯೆಗಳಿಗೆ ನಾವು ಸ್ಪಂದಿಸುತ್ತೇವೆ. ನೀವೆಲ್ಲ ಕಷ್ಟದ ಜೀವಿಗಳು. ನಿಮಗೆ ಎಂದೂ ಅನ್ಯಾಯ ಮಾಡುವುದಿಲ್ಲ. ಇಂದಿರಾ ಕ್ಯಾಂಟಿನ್ ಸೌಲಭ್ಯವನ್ನು ಬಳಸಿಕೊಳ್ಳಿ. ನಿಮ್ಮ ಕುಟುಂಬದ ಜವಾಬ್ದಾರಿಯನ್ನು ನಮಗೆ ಬಿಡಿ’ ಎಂದು ಹೇಳಿದರು.        

short by NP / read more at Prajavani

Comments