Skip to main content


ಜೆಡಿಎಸ್ ನಲ್ಲಿ ಹಣ ನೀಡಿದವರಿಗೆ ಮಾತ್ರ ಟಿಕೆಟ್

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ ಅವರು ಭಾಗವಹಿಸಿದ್ದ ವಿಕಾಸ ಪರ್ವ ಕಾರ್ಯಕ್ರಮದಲ್ಲೇ ಈ ಹೈಡ್ರಾಮಾ ನಡೆದಿದೆ. ಬಳ್ಳಾರಿ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಗಣಿ ಉದ್ಯಮಿ ಕಾಂಗ್ರೆಸ್ ಮುಖಂಡರಾಗಿದ್ದ ಇಕ್ಬಾಲ್ ಹೊತ್ತೂರರ ಹೆಸರನ್ನು ವಿಧಾನ ಪರಿಷತ್ ಸದಸ್ಯ ಶರವಣ ಅವರು ಘೋಷಣೆ ಮಾಡುತ್ತಿದ್ದಂತೆ ಮತ್ತೊಬ್ಬ ಟಿಕೆಟ್ ಆಕಾಂಕ್ಷಿಯಾಗಿದ್ದ  ಶ್ರೀನಿವಾಸ್ ಅಸಮಾಧಾನವನ್ನು ಹೊರಹಾಕಿ ವೇದಿಕೆಯಿಂದ ಹೊರನಡೆದಿದ್ದಾರೆ.

ಈ ವೇಳೆ ಪಕ್ಷದ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ನನಗೆ ಎಚ್ ಡಿ ದೇವೇಗೌಡರು ಟಿಕೆಟ್ ನೀಡುವುದಾಗಿ ಘೋಷಣೆ ಮಾಡಿದ್ದರು. ಆದರೆ ಇದೀಗ ಹಣ ಕೊಟ್ಟವರಿಗೆ ಟಿಕೆಟ್ ಮಾರಾಟ ಮಾಡಿದ್ದಾರೆಂದು ಗಂಭೀರ ಆರೋಪ ಮಾಡಿದರು.          

short by NP / read more at Public TV

Comments