Skip to main content


ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕಕ್ಕಾಗಿ ಸೈನಾ-ಸಿಂಧು ಹಣಾಹಣಿ

ಲಂಡನ್ ಒಲಿಂಪಿಕ್ಸ್ ನ ಕಂಚಿನ ಪದಕ ವಿಜೇತೆ ಸೈನಾ ನೆಹ್ವಾಲ್ ಹಾಗೂ ರಿಯೋ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದಿರುವ ಪಿ.ವಿ.ಸಿಂಧು ಮಧ್ಯೆ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ರೋಚಕ ಹಣಾಹಣಿ ನಡೆಯಲಿದೆ. ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್ ಫೈನಲ್ ನಲ್ಲಿ ಇಬ್ಬರು ಭಾರತೀಯ ಆಟಗಾರ್ತಿಯರು ಮುಖಾಮುಖಿಯಾಗುತ್ತಿದ್ದಾರೆ. ಇತ್ತೀಚೆಗಷ್ಟೆ ವಿಶ್ವ ರ್ಯಾಂಕಿಂಗ್ ನಲ್ಲಿ ನಂಬರ್ 1 ಸ್ಥಾನ ಪಡೆದಿರುವ ಕಿಡಂಬಿ ಶ್ರೀಕಾಂತ್ ಕೂಡ ಪುರುಷರ ಸಿಂಗಲ್ಸ್ ಫೈನಲ್ ತಲುಪಿದ್ದಾರೆ.ಇನ್ನು ಶ್ರೀಕಾಂತ್ ಫೈನಲ್ ಪಂದ್ಯದಲ್ಲಿ ಮಲೇಷಿಯಾದ ಲೀ ಚೊಂಗ್ ವಿ ಜೊತೆ ಸೆಣೆಸಲಿದ್ದಾರೆ. ಇಂದು ಸೈನಾ ಹಾಗೂ ಸಿಂಧು ನಡುವಣ ಫೈನಲ್ ಪಂದ್ಯ ತೀವ್ರ ಕುತೂಹಲ ಕೆರಳಿಸಿದೆ.

short by: Nithin / read more at Kannadanewsnow


Comments