Skip to main content


ಬಿಜೆಪಿ ಮೊದಲ ಪಟ್ಟಿ ಬಿಡುಗಡೆ!!

ಅಭ್ಯರ್ಥಿಗಳ ಆಯ್ಕೆ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಶನಿವಾರ ರಾತ್ರಿಯಿಂದ ಭಾನುವಾರ ರಾತ್ರಿವರೆಗೆ ನಿರಂತರವಾಗಿ ಸಭೆ ನಡೆಯಿತು. ಅಂತಿಮವಾಗಿ ರಾತ್ರಿ 11ರ ಸುಮಾರಿಗೆ ಮಾಧ್ಯಮಗೋಷ್ಠಿ ನಡೆಸಿದ ಪಕ್ಷದ ರಾಷ್ಟ್ರೀಯ ಚುನಾವಣಾ ಸಮಿತಿ ಕಾರ್ಯದರ್ಶಿ ಜೆ.ಪಿ. ನಡ್ಡಾ ಪಟ್ಟಿಯನ್ನು ಬಿಡುಗಡೆ ಮಾಡಿದರು. ಸಂಸದರಾದ ಬಿ.ಎಸ್. ಯಡಿಯೂರಪ್ಪ, ಬಿ. ಶ್ರೀರಾಮುಲು, ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಕೆ.ಎಸ್‌.ಈಶ್ವರಪ್ಪ, ಪರಿಷತ್‌ ಸದಸ್ಯರಾದ ವಿ.ಸೋಮಣ್ಣ, ಬಸನಗೌಡ ಪಾಟೀಲ ಯತ್ನಾಳ ಅವರು ಟಿಕೆಟ್‌ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಂಪೂರ್ಣ ಪಟ್ಟಿ ವೀಕ್ಷಿಸಲು ಕೆಳಗಿರುವ 'Prajavani' ಮೇಲೆ ಕ್ಲಿಕ್ ಮಾಡಿ.

short by NP / read more at Prajavani



Comments