Skip to main content


ರಾಹುಲ್ ಗಾಂಧಿ ರಾಜ್ಯದಲ್ಲಿ ಕೊನೆಯ ಜನಾಶೀರ್ವಾದ ಯಾತ್ರೆ

ಇಂದೂ ರಾಜ್ಯದಲ್ಲಿ ರಾಗಾ ಪ್ರವಾಸ- ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಬೃಹತ್ ಸಮಾವೇಶ. ರಾಹುಲ್ ಅವರು ಬೆಳಗ್ಗೆ 11 ಗಂಟೆಗೆ ಕೋಲಾರದ ಮುಳಬಾಗಿಲಿಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿ, ಕುರುಡುಮಲೆ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಂತರ ಮುಳಬಾಗಿಲು ಆಂಜನೇಯಸ್ವಾಮಿ ಹಾಗೂ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿ ರೋಡ್ ಶೋ ನಡೆಸಲಿದ್ದಾರೆ. ಮುಳಬಾಗಿಲಿನಿಂದ ಕೆಜಿಎಫ್ ಕ್ಯಾಸಂಬಳ್ಳಿಯಲ್ಲಿರುವ ಕೆ.ಸಿ.ರೆಡ್ಡಿ ಸ್ಮಾರಕಕ್ಕೆ ಭೇಟಿ ನೀಡಿದ ನಂತರ ಮಹಿಳಾ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅದಾದ ನಂತರ ಬಂಗಾರಪೇಟೆ ಹಾಗೂ ಕೋಲಾರ ಮತ್ತು  ಚಿಕ್ಕಬಳ್ಳಾಪುರದಲ್ಲಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.      

short by NP / read more at Public TV

Comments