Skip to main content


ಸ್ವಂತ ನಿರ್ಮಾಣ ಸಂಸ್ಥೆ ಹುಟ್ಟು ಹಾಕಲು ಮುಂದಾದ ನಟ ಯಶ್

ನಟ ರಾಕಿಂಗ್ ಸ್ಟಾರ್ ಯಶ್ ತಮ್ಮದೇ ಸ್ವಂತ ನಿರ್ಮಾಣ ಸಂಸ್ಥೆಯೊಂದನ್ನು ಹುಟ್ಟು ಹಾಕಲು ಚಿಂತನೆ ನಡೆಸಿದ್ದಾರೆ. ಪೇಸ್ ಬುಕ್ ನಲ್ಲಿ ಅಭಿಮಾನಿಯೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿ ನಿರ್ಮಾಣ ಸಂಸ್ಥೆಯೊಂದನ್ನು ಹುಟ್ಟು ಹಾಕಿ ಅದರಲ್ಲಿ ಯುವ ಪ್ರತಿಭೆ ಹಾಗೂ ನವ ನಿರ್ದೇಶಕರಿಗೆ ಅವಕಾಶ ನೀಡಿ ಪ್ರೋತ್ಸಾಹಿಸಲಾಗುವುದು. ಅನೇಕ ಹೊಸ ಪ್ರತಿಭೆಗಳು ಕೆಲವು ಅದ್ಭುತವಾದ ಕಥೆಗಳನ್ನು ಹೊಂದಿರುತ್ತಾರೆ ಮತ್ತು ನಿರ್ಮಾಪಕರಿಗಾಗಿ ಹುಡುಕುತ್ತಿರುತ್ತಾರೆ ಅಂತಹವರಿಗೆ ನಾನು ಚಿತ್ರ ಮಾಡಲು ಬಯಸುತ್ತೇನೆ ಎಂದಿದ್ದಾರೆ.   

short by Pawan / read more at 60secondsnow

Comments