Skip to main content


ಕಾಮುಕರ ಅಟ್ಟಹಾಸ! ಸೋದರನ ಎದುರಲ್ಲೇ ಸಾಮೂಹಿಕ ಅತ್ಯಾಚಾರ

ಮುಜಾಫರ್ ನಗರದಲ್ಲಿ ಕಾಮುಕರು ಅಟ್ಟಹಾಸ ಮೆರೆದಿದ್ದಾರೆ. ಸೋದರನ ಎದುರಲ್ಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಶಾಮ್ಲಿ ಜಿಲ್ಲೆಯ ಗ್ರಾಮವೊಂದರಲ್ಲಿ ಘಟನೆ ನಡೆದಿದ್ದು, ಮನೆಗೆ ನುಗ್ಗಿದ್ದ ಇಬ್ಬರು ಕಾಮುಕರು ಅಪ್ರಾಪ್ತ ವಯಸ್ಸಿನ ಬಾಲಕನನ್ನು ಕೂಡಿ ಹಾಕಿ, ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ. ಉಮೇರ್ ಖಾನ್, ಅಮಾನುಲ್ಲಾ ಅತ್ಯಾಚಾರ ಎಸಗಿದ ಆರೋಪಿಗಳಾಗಿದ್ದು, ದೂರು ದಾಖಲಾಗುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದಾರೆ. ಪೊಲೀಸರು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.     

short by Pawan / more at Kannadadunia

Comments