Skip to main content


ಮಂಗಳೂರಿನ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸ್ ದಾಳಿ, ಮೂವರು ಆರೋಪಿಗಳು ಅರೆಸ್ಟ್

ವೇಶ್ಯಾವಾಟಿಕೆಗೆ ಪ್ರೇರೆಪಿಸುತ್ತಿದ್ದ ಮಸಾಜ್ ಸೆಂಟರ್ ಮೇಲೆ ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಬರ್ಕೆ ಠಾಣೆಯ ಪೊಲೀಸರು ದಾಳಿ ಮಾಡಿ 3 ಜನರನ್ನು ಬಂಧಿಸಿದ್ದಾರೆ.ಮಂಗಳೂರು ನಗರದ ಬಿಜೈ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿ ಇರುವ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ನಡೆಸುತ್ತಿದ್ದ ಮಸಾಜ್ ಸೆಂಟರ್ ನಲ್ಲಿ ಯುವತಿಯರು ಹಾಗೂ ಮಹಿಳೆಯರನ್ನು ಇಟ್ಟುಕೊಂಡು ಬಾಡಿ ಮಸಾಜ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಖಚಿತ ಮಾಹಿತಿಯ ಆದಾರದ ಮೇಲೆ ದಾಳಿ ನಡೆಸಿದ ಪೊಲೀಸರು ಉಮೇಶ್, ಜಗದೀಶ್, ಮಹೇಂದ್ರ ಕುಮಾರ್ ಎಂಬುವರನ್ನು ಬಂಧಿಸಿದ್ದಾರೆ.

short by: Nithin / read more at Kannadanewsnow


Comments