Skip to main content


ಅಧಿಕಾರಕ್ಕೆ ಬಂದ ತಕ್ಷಣ ಸಹಕಾರಿ, ರಾಷ್ಟ್ರೀಕೃತ ಬ್ಯಾಂಕ್‌ ಸಾಲ ಮನ್ನಾ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳ ಬೆಳೆ ಸಾಲಮನ್ನಾ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಕಲಬುರಗಿ ದಕ್ಷಿಣ, ಉತ್ತರ, ಗ್ರಾಮೀಣದಲ್ಲಿ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಾಲಮನ್ನಾದ ಅಂಶಗಳು ಪಕ್ಷದ ಪ್ರಣಾಳಿಕೆಯಲ್ಲಿ ಇರಲಿವೆ. ಏ.30ರಂದೇ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಬೇಕಿತ್ತು. ಆದರೆ, ಕಾರಣಾಂತರಗಳಿಂದ ಸಾಧ್ಯವಾಗಿಲ್ಲ. ಇನ್ನೆರಡು ದಿನಗಳಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮೇ 17 ಅಥವಾ 18ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಮ್ಮುಖದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತೇನೆ ಎಂದರು.         

short by NP / read more at Udayavani

Comments