Skip to main content


ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ಫಿನಿಶ್ – ಸಿಎಂ ಮಗನಿಗೆ ಟಿಕೆಟ್ ಸಲುವಾಗಿ ಸಖತ್ ಫೈಟ್

ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿ ಸಭೆ ಅಂತ್ಯವಾಗಿದೆ. ಎರಡು ಹಂತಗಳಲ್ಲಿ ನಡೆದ ಸಭೆಯಲ್ಲಿ ಹಾಲಿ ಶಾಸಕರು ಸೇರಿದಂತೆ ಕಳೆದ ಬಾರಿ ಕಡಿಮೆ ಅಂತರದಿಂದ ಸೋತ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ತಿರ್ಮಾನಕ್ಕೆ ಬಂದಿದ್ದಾರೆ.

ಇದರ ಜೊತೆ ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರಿದ ಜೆಡಿಎಸ್ ಬಂಡಾಯ ಶಾಸಕರು, ಆನಂದ್ ಸಿಂಗ್, ಅಶೋಕ್ ಖೇಣಿ ಹಾಗೂ ನಾಗೇಂದ್ರ ಅವರಿಗೆ ಟಿಕೆಟ್ ನೀಡುವ ಬಗ್ಗೆ ಚರ್ಚಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಮಗ ಯತೀಂದ್ರಗೆ ಟಿಕೆಟ್ ಸಲುವಾಗಿ ಸಭೆಯಲ್ಲಿ ಸಖತ್ ಫೈಟ್ ನಡೆದಿದ್ದು, ಒಮ್ಮತದ ನಿರ್ಧಾರಕ್ಕೆ ಬರಲಿಲ್ಲ. ಹೀಗಾಗಿ ಮುಖಂಡರ ಮಕ್ಕಳಿಗೆ ಟಿಕೆಟ್ ನೀಡುವ ವಿಚಾರನ್ನು ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದಾರೆ ಎನ್ನಲಾಗಿದೆ.          

short by NP / read more at Public TV

Comments