Skip to main content


ಧೋನಿ, ರಾಯ್ಡು ಬ್ಯಾಟಿಂಗ್ ವೈಭವ; ಆರ್ ಸಿ ಬಿ ಪರಾಭವ

ಆರಂಭಿಕ ಆಟಗಾರ ಅಂಬಟಿ ರಾಯ್ಡು ( 82) ಹಾಗೂ ನಾಯಕ ಮಹೇಂದ್ರ ಸಿಂಗ್ ಧೋನಿ (ಅಜೇಯ 70) ಅವರ ಅರ್ಧಶತಕದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 5 ವಿಕೆಟ್ ಗಳಿಂದ ಪರಾಭವಗೊಳಿಸಿತು.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ನಾಯಕ ಧೋನಿ ವಿರಾಟ್ ಕೊಹ್ಲಿ ನೇತೃತ್ವದ ಆರ್ ಸಿಬಿಯನ್ನು ಮೊದಲು ಬ್ಯಾಟಿಂಗ್ ಗೆ ಆಹ್ವಾನಿಸಿದರು. ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿ ಬಿ ಆರಂಭಿಕ ಆಟಗಾರ ಡಿಕಾಕ್ (53) ಹಾಗೂ ಎಬಿ ಡಿವಿಲಿಯರ್ಸ್ (68) ಅವರ ಅರ್ಧಶತಕದ ಬಲದಿಂದ ನಿಗಧಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 205ರನ್ ಗಳನ್ನು ಮಾಡಿತ್ತು.      

short by Prajwal / more at Newspoint

Comments