Skip to main content


ಐಪಿಎಲ್‌ ಇತಿಹಾಸದಲ್ಲೇ ಅತಿ ವೇಗದ ಅರ್ಧಶತಕ ಸಿಡಿಸಿದ ನಮ್ಮ ಕನ್ನಡಿಗ!

ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್ ಇತಿಹಾಸದಲ್ಲೇ ಅತಿ ವೇಗದ ಅರ್ಧಶತಕ ಬಾರಿಸಿದ ದಾಖಲೆಗೆ ಕರ್ನಾಟಕದ ಕೆಎಲ್ ರಾಹುಲ್ ಪಾತ್ರವಾಗಿದ್ದಾರೆ.  ಐಪಿಎಲ್ 2018ರ ಆವೃತ್ತಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಆಡುತ್ತಿರುವ ಕನ್ನಡಿಗ ರಾಹುಲ್ ಅವರು ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧ ಪಂದ್ಯದಲ್ಲಿ ಕೇವಲ 14 ಎಸೆತಗಳಲ್ಲಿ ಅರ್ಧಶತಕವನ್ನು ಸಿಡಿಸಿದ್ದಾರೆ. ರಾಹುಲ್ ಇನ್ನಿಂಗ್ಸ್‌ನಲ್ಲಿ ಆರು ಬೌಂಡರಿ ಹಾಗೂ ನಾಲ್ಕು ಭರ್ಜರಿ ಸಿಕ್ಸರ್‌ಗಳು ಸೇರಿದ್ದವು. ಅಂತಿಮವಾಗಿ 16 ಎಸೆತಗಳಲ್ಲಿ 51 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.     

short by Pawan / read more at Vijayakarnataka