Skip to main content


ಭ್ರಷ್ಟಾಚಾರ, ನಿದ್ದೆ ಸಿದ್ದು ಸಾಧನೆ

ರಾಜ್ಯದಲ್ಲಿ ಐದು ವರ್ಷ ಅಧಿಕಾರ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಿದ್ದೆ ಮತ್ತು ಭ್ರಷ್ಟಾಚಾರ ಬಿಟ್ಟು ಬೇರೆ ಏನನ್ನೂ ಮಾಡಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಆರೋಪಿಸಿದರು. ನಗರದ ಜ್ಞಾನಜೋತಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಾಣಿಜೋದ್ಯಮಿಗಳು ಮತ್ತು ವೃತ್ತಿಪರರ ಜತೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಬೆಂಗಳೂರನ್ನು ಸಂಪೂರ್ಣವಾಗಿ ಹಾಳು ಮಾಡಿದೆ. ಉದ್ಯಮಿಗಳು ಬಿಜೆಪಿಗೆ ಮತ ನೀಡಿದರೆ ಸಾಲದು, ಬೆಂಗಳೂರಿನಿಂದ ಬಿಜೆಪಿ ಅಲೆಯ ಸುನಾಮಿ ಸೃಷ್ಟಿಸಿ ರಾಜ್ಯಾದ್ಯಂತ ಹಬ್ಬಿಸಬೇಕು ಎಂದು ಹೇಳಿದರು. ಐದು ವರ್ಷ ಯಾವುದೇ ಅಡೆತಡೆ ಇಲ್ಲದೇ ಬಿಜೆಪಿ ಅಧಿಕಾರ ಮಾಡುವಂತೆ ಆಶೀರ್ವಾದ ಮಾಡಿದರೆ ಕರ್ನಾಟಕವನ್ನು ಮಾದರಿ ರಾಜ್ಯವಾಗಿ ಮಾಡುತ್ತೇವೆ ಎಂದು ಭರವಸೆ ನೀಡಿದರು.     

short by NP / read more at Udayavani

Comments