Skip to main content


ಎನ್‍ಆರ್ ರಮೇಶ್‍ಗೆ ಟಿಕೆಟ್ ಸಿಗದ್ದಕ್ಕೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ!

ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಎನ್ ಆರ್ ರಮೇಶ್ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅವರ ಅಭಿಮಾನಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.  ಅಶೋಕ್ ರಿಂದಾಗಿಯೇ ಅನ್ಯಾಯವಾಗಿದೆ ಅಂತ ಆಕ್ರೋಶ ವ್ಯಕ್ತವಾಗುತ್ತಿದ್ದು, ಹಿರಿಯ ಅಭಿಮಾನಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಯತ್ನಿಸಿದ್ದಾರೆ. ಒಟ್ಟಿನಲ್ಲಿ ಚಿಕ್ಕಪೇಟೆ ಕ್ಷೇತ್ರದ ಬಿಜೆಪಿ ಟಿಕೆಟ್ ವಿಚಾರದಲ್ಲಿ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಯಡಿಯೂರು ವಾರ್ಡ್, ಎನ್ ಆರ್ ಕಾಲೊನಿ ಅಂಗಡಿ ಮುಂಗಟ್ಟುಗಳು ಬಂದ್ ಮಾಡಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.    

short by NP / read more at Public TV

Comments