Skip to main content


ಕಿಂಗ್ಸ್‌ ಇಲೆವನ್‌ಗೆ ರೋಚಕ ಗೆಲುವು

ಮುಜೀಬ್‌ ಉರ್‌ ರೆಹಮಾನ್‌ (25ಕ್ಕೆ2) ಅವರ ಪರಿಣಾಮಕಾರಿ ಬೌಲಿಂಗ್‌ ನೆರವಿನಿಂದ ಕಿಂಗ್ಸ್‌ ಇಲೆವನ್‌ ಪಂಜಾಬ್‌ ತಂಡ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) 11ನೇ ಆವೃತ್ತಿಯ ಪಂದ್ಯದಲ್ಲಿ 4ರನ್‌ಗಳ ರೋಚಕ ಗೆಲುವು ದಾಖಲಿಸಿದೆ. ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣದಲ್ಲಿ ಸೋಮವಾರ ರಾತ್ರಿ ನಡೆದ ಡೆಲ್ಲಿ ಡೇರ್‌ ಡೆವಿಲ್ಸ್‌ ಎದುರಿನ ಪಂದ್ಯದಲ್ಲಿ ಕಿಂಗ್ಸ್ ತಂಡ ಸಾಧಾರಣ ಮೊತ್ತ ಗಳಿಸಿತು. ಗುರಿ ಬೆನ್ನಟ್ಟಿದ ಗೌತಮ್‌ ಗಂಭೀರ್‌ ಸಾರಥ್ಯದ ಡೇರ್‌ ಡೆವಿಲ್ಸ್‌ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 139ರನ್‌ ಕಲೆಹಾಕಲಷ್ಟೇ ಶಕ್ತವಾಯಿತು.ಈ ತಂಡದ ಗೆಲುವಿಗೆ ಅಂತಿಮ ಓವರ್‌ನಲ್ಲಿ 17ರನ್‌ಗಳು ಬೇಕಿದ್ದವು. ಶ್ರೇಯಸ್‌ ಅಯ್ಯರ್‌ 12ರನ್‌ ಗಳಿಸಲಷ್ಟೇ ಶಕ್ತರಾದರು.                 

short by Prajwal / read more at Prajavani

Comments