Skip to main content


ಚಿಕಿತ್ಸೆಗೆ ಹೋಗಿದ್ದ ಬಾಲಕಿಗೆ ಡ್ರಗ್ಸ್​ ನೀಡಿ ವೈದ್ಯನಿಂದ ಅತ್ಯಾಚಾರ

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣಗಳು ದಿನಕ್ಕೊಂದು ಬೆಳಕಿಗೆ ಬರುತ್ತಿದ್ದು, ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಚಿಕಿತ್ಸೆಗೆಂದು ಆಸ್ಪತ್ರೆಗೆ ಹೋಗಿದ್ದ 13 ವರ್ಷದ ಬಾಲಕಿ ಮೇಲೆ ಕಾಮುಕ ವೈದ್ಯನೊಬ್ಬ ರಾಕ್ಷಸಿ ಪ್ರವೃತ್ತಿ ಮೆರೆದಿರುವ ಘಟನೆ ಮುಜಾಫರ್​ ನಗರದಲ್ಲಿ ನಡೆದಿದೆ. ಈ ಘಟನೆ ಕಳೆದ ಮಂಗಳವಾರ ಅಪ್ರಾಪ್ತೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿದ್ದಾಗ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಪ್ರಾಪ್ತೆಗೆ ಬಲವಂತವಾಗಿ ಡ್ರಗ್ಸ್ ಸೇವನೆ ಮಾಡಿಸಿರುವುದು ಬಹಿರಂಗವಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ತನಿಖಾ ವೇಳೆ ಆಸ್ಪತ್ರೆಯಲ್ಲಿ ಕೆಲವೊಂದು ಆಕ್ಷೇಪಾರ್ಹ ವಸ್ತುಗಳು ದೊರೆತಿದ್ದು, ಈ ಕುರಿತಾಗಿ ತನಿಖೆ ಮುಂದುವರಿದಿದೆ.        

short by NP / read more at Vijayavani

Comments