Skip to main content


ಬಾದಾಮಿಯಲ್ಲಿ ನೀತಿ ಸಂಹಿತೆ ಉಲ್ಲಂಘನೆ: ಐವರು ಕಾಂಗ್ರೆಸ್ ನಾಯಕರ ವಿರುದ್ಧ ಎಫ್ಐಆರ್

ರಾಜ್ಯ ವಿಧಾನಸಭಾ ಚುನಾವಣೆಯ ಹೈ ವೋಲ್ಟೇಜ್ ಕ್ಷೇತ್ರ ಬಾದಾಮಿಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆರೋಪ ಕೇಳಿ ಬಂದಿದ್ದು, ಐವರು ಕಾಂಗ್ರೆಸ್ ಮುಖಂಡರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಎಸ್. ಆರ್.ಪಾಟೀಲ್, ಸಚಿವ ಆರ್.ಬಿ. ತಿಮ್ಮಾಪುರ, ಶಾಸಕ ಬಿ.ಬಿ. ಚಿಮ್ಮಕಟ್ಟಿ ಸೇರಿ ಐವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಪರವಾನಗಿ ಇಲ್ಲದೇ ದೇವಸ್ಥಾನದ ಆವರಣದಲ್ಲಿ ಸಾರ್ವಜನಿಕರನ್ನು ಸೇರಿಸಿ ಚುನಾವಣಾ ಪ್ರಚಾರದ ಆರೋಪ ಕೇಳಿ ಬಂದಿದೆ.         

short by NP / more at Kannada News Now

Comments