Skip to main content


ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗ್ತಿದ್ದರೂ ದೇಶೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 1 ವಾರದಿಂದ ಬದಲಾವಣೆ ಮಾಡಿಲ್ಲ. ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿರುವುದರಿಂದ ದೈನಂದಿನ ತೈಲ ಬೆಲೆ ಪರಿಷ್ಕರಣೆ ಮಾಡಿಲ್ಲ ಎನ್ನಲಾಗಿದೆ. ಚುನಾವಣೆ ಮುಗಿದ ಬಳಿಕ ದರ ಪರಿಷ್ಕರಣೆ ಮಾಡುವ ಸಾಧ್ಯತೆ ಇದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಭಾರೀ ಏರಿಕೆಯಾಗಿದ್ದು, ದಾಖಲೆ ಬರೆಯುತ್ತಿವೆ. ಹೀಗಿರುವಾಗ ಎಕ್ಸೈಸ್ ಡ್ಯೂಟಿ ಕಡಿಮೆ ಮಾಡಬೇಕೆಂಬ ಒತ್ತಡ ತೀವ್ರವಾಗಿ ಕೇಳಿ ಬಂದಿದೆ. ಪೆಟ್ರೋಲಿಯಂ ಸಚಿವಾಲಯ ಬೆಲೆ ಇಳಿಸಲು ಅಬಕಾರಿ ಸುಂಕ ಕಡಿಮೆ ಮಾಡಬೇಕೆಂದು ಹಣಕಾಸು ಇಲಾಖೆಗೆ ಮನವಿ ಮಾಡಿದೆ. ಆದರೆ, ಹಣಕಾಸು ಇಲಾಖೆ ಸ್ಪಂದಿಸಿಲ್ಲ. ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ. ತೈಲದ ಮೇಲಿನ ಎಕ್ಸೈಸ್ ಡ್ಯೂಟಿ ಕಡಿತ ಮಾಡುವ ಕುರಿತು ಸರ್ಕಾರ ಯೋಚಿಸಿಲ್ಲ ಎಂದು ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ಸುಭಾಷ್ ಚಂದ್ರ ಗರ್ಗ್ ಮಾಹಿತಿ ನೀಡಿದ್ದಾರೆ.      

short by Pawan / more at Kannadadunia

Comments