Skip to main content


ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ: ಬಾದಾಮಿಯಿಂದ ಸಿ.ಎಂ, ಮಂಡ್ಯದಿಂದ ಅಂಬರೀಷ್ ನಾಮಪತ್ರ ಸಲ್ಲಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಆಗಮಿಸಲಿದ್ದಾರೆ. ನಂತರ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ಮೂಲಕ ತಹಶೀಲ್ದಾರರ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಇದ್ದ ಭಿನ್ನಮತ ಶಮನಗೊಳಿಸಲು ಹಾಗೂ ಚಾಮುಂಡೇಶ್ವರಿಯಲ್ಲಿ ಬಂದ ವ್ಯತಿರಿಕ್ತ ಸರ್ವೆಯಿಂದ ಬಾದಾಮಿಯ ಕ್ಷೇತ್ರವನ್ನು ಆಯ್ಕೆ ಮಾಡಿದ್ದಾರೆ. ಮಂಡ್ಯ ಹಾಲಿ ಶಾಸಕ ಅಂಬರೀಶ್ ಕೊನೆಗೂ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಕ್ಕೆ ಒಪ್ಪಿಕೊಂಡಿದ್ದು, ಇಂದು ಮಂಡ್ಯಕ್ಕೆ ತೆರಳಿ ತಮ್ಮ ಬೆಂಬಲಿಗರೊಂದಿಗೆ ಮಂಡ್ಯದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗಿದೆ.             

short by NP / read more at Kannada News Now

Comments