Skip to main content


ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯ ಮುಖ್ಯಮಂತ್ರಿ

ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸುಳಿವು ನೀಡಿದ್ದಾರೆ. ಕಾಂಗ್ರೆಸ್‌ ಜನಾಶೀರ್ವಾದ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಬಂದಿರುವ ಅವರು, ಮಾಧ್ಯಮ ಪ್ರತಿನಿಧಿಗಳೊಂದಿಗೆ ಭಾನುವಾರ ಅನೌಪಚಾರಿಕ ಚರ್ಚೆ ನಡೆಸಿದರು. ಮತ್ತೊಂದು ಹಂತದಲ್ಲಿ, ‘ಮುಂದಿನ ಮುಖ್ಯಮಂತ್ರಿ ಯಾರು ಎನ್ನುವುದು ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧಾರವಾಗುತ್ತದೆ’ ಎಂದೂ ಅವರು ಹೇಳಿದರು.      

short by NP / read more at Prajavani

Comments