Skip to main content


ಕನ್ನಡಿಗರಾದ ರಾಹುಲ್, ಕರುಣ್ ಫಿಫ್ಟಿ; ಪಂಜಾಬ್‌ಗೆ ಮೊದಲ ಜಯ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ ಭಾನುವಾರ ಡೆಲ್ಲಿ ಡೇರ್‌ಡೆವಿಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಕನ್ನಡಿಗರಾದ ಕೆಎಲ್ ರಾಹುಲ್ ಹಾಗೂ ಕರುಣ್ ನಾಯರ್ ಬಾರಿಸಿರುವ ಬಿರುಸಿನ ಅರ್ಧಶತಕಗಳ ನೆರವಿನಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವು ಆರು ವಿಕೆಟುಗಳ ಅಂತರದ ಗೆಲುವು ದಾಖಲಿಸಿದೆ. ಪಂಜಾಬ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ರಾಹುಲ್ ಕೇವಲ 14 ಎಸೆತಗಳಲ್ಲಿ ಅರ್ಧಶತಕದ ಸಾಧನೆ ಮಾಡಿದರು. ಇದು ಐಪಿಎಲ್ ಇತಿಹಾಸದಲ್ಲೇ ದಾಖಲಾದ ಅತಿ ವೇಗದ ಅರ್ಧಶತಕವಾಗಿದೆ. ಈ ಮುನ್ನ ನಾಯಕ ಗೌತಮ್ ಗಂಭೀರ್ ಅವರ ಆಕರ್ಷಕ ಅರ್ಧಶತಕದ (55) ಬೆಂಬಲದೊಂದಿಗೆ ಡೆಲ್ಲಿ ಡೇರ್ ಡೆವಿಲ್ಸ್ ನಿಗದಿತ 20 ಓವರ್‌ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿತ್ತು.            

Short by Prajwal / read more at Vijayakarnataka

Comments