Skip to main content


ಮೂರನೇ ದಿನ ಆರು ನಾಮಪತ್ರ

ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಉಪ ಮುಖ್ಯಮಂತ್ರಿ ಆರ್‌.ಅಶೋಕ್‌, ಜಯನಗರ ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ ಬಿ.ಎನ್‌.ವಿಜಯಕುಮಾರ್‌, ಹೆಬ್ಟಾಳ ವಿಧಾನಸಭಾ ಕ್ಷೇತ್ರದಿಂದ ವೈ.ಎ.ನಾರಾಯಣಸ್ವಾಮಿ ಹಾಗೂ ಯಲಹಂಕ ಕ್ಷೇತ್ರದಿಂದ ಎಸ್‌.ಆರ್‌.ವಿಶ್ವನಾಥ್‌ ಬಿಜೆಪಿ ಅಭ್ಯರ್ಥಿಗಳಾಗಿ ಗುರುವಾರ ನಾಮಪತ್ರ ಸಲ್ಲಿಸಿದರು. ಇದೇ ವೇಳೆ ಕೆ.ಆರ್‌.ಪುರದಿದ ಬೈರತಿ ಬಸವರಾಜ್‌ ಮತ್ತು ಚಿಕ್ಕಪೇಟೆ ಕ್ಷೇತ್ರದಿಂದ ಆರ್‌.ವಿ.ದೇವರಾಜ್‌ ಕಾಂಗ್ರೆಸ್‌ ಅಭ್ಯರ್ಥಿಗಳಾಗಿ ಉಮೇದುವಾರಿಕೆ ಸಲ್ಲಿಸಿದ್ದಾರೆ. ಆರ್‌.ಅಶೋಕ್‌ ಅವರು ಪದ್ಮನಾಭನಗರದಲ್ಲಿರುವ ಚೆನ್ನಮ್ಮನ ಕೆರೆ ಅಂಗಳದಲ್ಲಿರುವ ಬಿಬಿಎಂಪಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರೆ, ಬಿ.ಎನ್‌. ವಿಜಯಕುಮಾರ್‌ ಅವರು ಜಯನಗರ ಬಿಡಿಎ ಕಾಂಪ್ಲೆಕ್ಸ್‌ನಲ್ಲಿರುವ ಚುನಾವಣಾಧಿಕಾರಿ ಕಚೇರಿಯಲ್ಲಿ ಉಮೇದುವಾರಿಕೆ ಸಲ್ಲಿಸಿದರು.      

short by NP / read more at Udayavani

Comments