Skip to main content


ಏಕದಿನ ಸರಣಿ : ಇಂಗ್ಲೆಂಡ್ ವಿರುದ್ಧ ರೋಚಕ ಜಯ ಸಾಧಿಸಿದ ಮಿಥಾಲಿ ಪಡೆ

ಪ್ರವಾಸಿ ಇಂಗ್ಲೆಂಡ್ ತಂಡದ ವಿರುದ್ಧ ಪೇಟಿಎಮ ನಾಲ್ಕು ಏಕದಿನ ಪಂದ್ಯಗಳ ಸರಣಿಯಲ್ಲಿ ಮೊದಲ ಪಂದ್ಯದಲ್ಲಿ ಭಾರತ ಮಹಿಳಾ ತಂಡ 1 ವಿಕೆಟ್ ನಿಂದ ರೋಚಕ ಗೆಲುವು ದಾಖಲಿಸಿ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿದೆ. ನಾಗ್ಪುರದ ವಿದರ್ಭ ಕ್ರಿಕೆಟ್ ಅಸೊಸಿಯೇಶನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಫ್ರಾನ್ಸ್ ವಿಲ್ಸನ್ (45) ರನ್ ಗಳ ನೆರವಿನಿಂದ ಇಂಗ್ಲೆಂಡ್ ತಂಡ 49.3 ಓವರ್ ಗಳಲ್ಲಿ 207 ರನ್ ಗೆ ಆಲೌಟ್ ಆಯಿತು. ಗುರಿ ಬೆನ್ನತ್ತಿದ ಭಾರತ ತಂಡ ಆರಂಭಿಕ ಆಟಗಾರ್ತಿ ಸ್ಮೃತಿ ಮಂದನಾ (86), ಬಳಿಕ ಹರ್ಮನ್ ಪ್ರೀತ್ ಕೌರ್ (21) ಮತ್ತು ದೀಪ್ತಿ ಶರ್ಮಾ (24) ರನ್ ಗಳ ನೆರವಿನಿಂದ ಭಾರತ ತಂಡ 49.1 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು ಗೆಲುವಿನ ಗುರಿ ತಲುಪಿತು.            

Short by Prajwal / read more at dailyhunt

Comments