Skip to main content


ಇಂದು ಕಿಂಗ್ಸ್ ಇಲೆವೆನ್ ಪಂಜಾಬ್ ಎದುರಾಳಿ ಸನ್‌ರೈಸರ್ಸ್ ಗೆ ಗೆಲುವಿನ ಓಟ ಮುಂದುವರಿಸುವ ಗುರಿ

ಅಜೇಯ ಗೆಲುವಿನ ಓಟದೊಂದಿಗೆ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡ ಗುರುವಾರ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ಮೂರನೇ ಸ್ಥಾನದಲ್ಲಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಎದುರಿಸಲಿದೆ. ಕೇನ್ ವಿಲಿಯಮ್ಸನ್ ನಾಯಕತ್ವದ ಸನ್‌ರೈಸರ್ಸ್ ತಂಡ ಈ ತನಕ ಆಡಿರುವ ಎಲ್ಲ ಮೂರೂ ಪಂದ್ಯಗಳನ್ನು ಗೆದ್ದುಕೊಂಡಿದೆ. ಬೌಲರ್‌ಗಳ ಉತ್ತಮ ಪ್ರದರ್ಶನವೇ ಸನ್‌ರೈಸರ್ಸ್ ಗೆಲುವಿನ ಓಟಕ್ಕೆ ಕಾರಣವಾಗಿದೆ. ಮತ್ತೊಂದೆಡೆ, ರವಿಚಂದ್ರನ್ ಅಶ್ವಿನ್ ನೇತೃತ್ವದ ಹೊಸ ಲುಕ್ ಪಡೆದಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಬ್ಯಾಟಿಂಗ್ ವಿಭಾಗದಲ್ಲಿ ಆಕ್ರಮಣಕಾರಿಯಾಗಿದ್ದು, ಎದುರಾಳಿ ತಂಡದ ದಾಳಿಯನ್ನು ದಿಟ್ಟವಾಗಿ ಎದುರಿಸುತ್ತಾ ಬಂದಿದೆ. ಆತಿಥೇಯ ಪಂಜಾಬ್ ತಂಡ ಈತನಕ ಆಡಿರುವ 3 ಪಂದ್ಯಗಳ ಪೈಕಿ ಎರಡರಲ್ಲಿ ಜಯ ಸಾಧಿಸಿದೆ.       

Short by Prajwal / read more at Varthabharathi

Comments