Skip to main content


ಕೋಲ್ಕತಾಕ್ಕೆ ಆರ್‌ಸಿಬಿ ಸವಾಲು

ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡ ಇಂಡಿಯನ್‌ಪ್ರೀಮಿಯರ್ ಲೀಗ್ ಟ್ವೆಂಟಿ-20 ಟೂರ್ನಿಯ ಪಂದ್ಯದಲ್ಲಿ ರವಿವಾರ ಕೋಲ್ಕತಾ ನೈಟ್ ರೈಡರ್ಸ್‌ ತಂಡವನ್ನು ಎದುರಿಸಲಿದೆ. ಆರ್‌ಸಿಬಿ ತಂಡ ನಾಲ್ಕು ಸೋಲು ಮತ್ತು ಎರಡು ಪಂದ್ಯಗಳಲ್ಲಿ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಇದೇ ವೇಳೆ ಕೋಲ್ಕತಾ ತಂಡ 3 ಗೆಲುವು ಮತ್ತು 4 ಪಂದ್ಯಗಳಲ್ಲಿ ಸೋಲು ಅನುಭವಿಸಿ ನಾಲ್ಕನೇ ಸ್ಥಾನ ಪಡೆದಿದೆ.ಕಳೆದ ವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆಘಾತಕಾರಿ ಸೋಲು ಅನುಭವಿಸಿತ್ತು. ಶುಕ್ರವಾರ ರಾತ್ರಿ ನಡೆದ ಪಂದ್ಯದಲ್ಲಿ ಕೆಕೆಆರ್ ತಂಡಕ್ಕೆ ಡೆಲ್ಲಿ ಡೇರ್‌ಡೆವಿಲ್ಸ್ ಸೋಲುಣಿಸಿತ್ತು.               

short by Prajwal / more at Newspoint

Comments