Skip to main content


ನಾಮಪತ್ರ ವಾಪಸ್‌ಗೆ ಕಡೇ ದಿನ

ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರ ಹಿಂತೆಗೆದುಕೊಳ್ಳಲು ಶುಕ್ರವಾರ ಕಡೆಯ ದಿನವಾಗಿದ್ದು, ಅಂತಿಮ ಚುನಾವಣಾ ಅಖಾಡ ನಿರ್ಧಾರಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಬಂಡಾಯ ಶಮನಕ್ಕೆ ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್‌, ಬಿಜೆಪಿ ಮತ್ತು ಜೆಡಿಎಸ್‌ ಕೊನೇ ಕ್ಷಣದ ಪ್ರಯತ್ನಗಳನ್ನು ತೀವ್ರಗೊಳಿಸಿವೆ. ಅದರಲ್ಲೂ ಆಡಳಿತಾರೂಢ ಕಾಂಗ್ರೆಸ್‌ ಮತ್ತು ಪ್ರಮುಖ ಪ್ರತಿಪಕ್ಷ ಬಿಜೆಪಿಯಲ್ಲಿ ಬಂಡಾಯದ ಬಿಸಿ ಜೋರಾಗಿದ್ದು, ಎರಡೂ ಪಕ್ಷಗಳಲ್ಲಿ 20ಕ್ಕೂ ಹೆಚ್ಚು ಬಂಡಾಯ ಅಭ್ಯರ್ಥಿಗಳು ಕಾಣಿಸಿ ಕೊಳ್ಳುವ ಆತಂಕ ಎದುರಾಗಿದೆ. ಜೆಡಿಎಸ್‌ನಲ್ಲೂ ಮೂರ್ನಾಲ್ಕು ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಗಳ ಭೀತಿ ಇದೆ.       

short by NP / more at Udayavani

Comments