Skip to main content


ಚರಂಡಿಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ- ರಕ್ಷಿಸಿ ಮಾನವೀಯತೆ ಮೆರೆದ ಪೌರ ಕಾರ್ಮಿಕರು

ತಾಯಿಯೊಬ್ಬಳು ಆಗ ತಾನೇ ಜನಿಸಿದ ನವಜಾತ ಹೆಣ್ಣು ಶಿಶುವನ್ನು ಚರಂಡಿಯಲ್ಲಿ ಬಿಸಾಕಿ ಹೋಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಕುರಬಗೇರಿಯ ಚರಂಡಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆಯಾಗಿದ್ದು, ಇಂದು ಬೆಳಗ್ಗೆ ಪೌರ ಕಾರ್ಮಿಕರು ಸ್ವಚ್ಛತೆಗೆಂದು ಬಂದಾಗ ಶಿಶುವಿನ ಚೀರಾಟವನ್ನು ಕೇಳಿ ಚರಂಡಿ ಬಳಿ ಹೋಗಿದ್ದಾರೆ. ಈ ವೇಳೆ ಆಗ ತಾನೇ ಜನಿಸಿದ ಹೆಣ್ಣು ಮಗುವನ್ನು ಚರಂಡಿಗೆ ಎಸೆದು ಹೋಗಿರುವುದು ಪತ್ತೆಯಾಗಿದೆ.    

short by: NP

Comments