Skip to main content


ಬಾಬಾ ಬುಡನ್‌ಗಿರಿ ವಿವಾದ: ಶಾಖಾದ್ರಿ ಉಸ್ತುವಾರಿಗೆ ಸಮ್ಮತಿ

ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್‌ ಸ್ವಾಮಿ ದರ್ಗಾದಲ್ಲಿನ ಧಾರ್ಮಿಕ ವಿಧಿಯ ಮೇಲುಸ್ತುವಾರಿಯನ್ನು ಸೈಯ್ಯದ್‌ ಗೌಸ್‌ ಮೊಹಿಯುದ್ದಿನ್‌ ಶಾಖಾದ್ರಿ ಅವರಿಗೆ ವಹಿಸಿರುವುದಾಗಿ ರಾಜ್ಯ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಹಿಂದೂ ಮತ್ತು ಮುಸ್ಲಿಂ ಸಮುದಾಯದ ಸಾವಿರಾರು ಭಕ್ತರು ಭೇಟಿ ನೀಡಿ ಪೂಜೆ ಸಲ್ಲಿಸುವ ಈ ಧಾರ್ಮಿಕ ಕ್ಷೇತ್ರಕ್ಕೆ ಸಂಬಂಧಿಸಿದ ವಿವಾದವನ್ನು ಇತ್ಯರ್ಥಪಡಿಸುವಲ್ಲಿ ವಿಳಂಬ ಆಗಿರುವುದಕ್ಕೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಅವರು ಬೇಷರತ್‌ ಕ್ಷಮೆ ಯಾಚಿಸಿ ಸಲ್ಲಿಸಿರುವ ಹೇಳಿಕೆಯನ್ನು ಮಾನ್ಯ ಮಾಡುವುದಾಗಿ ತಿಳಿಸಿದ ನ್ಯಾಯಪೀಠ, ಪ್ರಕರಣ ಇತ್ಯರ್ಥಪಡಿಸಿ ಸರ್ಕಾರ ನೀಡಿರುವ ವರದಿಯನ್ನೂ ಒಪ್ಪಿಕೊಳ್ಳುವುದಾಗಿ ಹೇಳಿತು.       
   
short by NP / read more at Prajavani