Skip to main content


ಕೇಂದ್ರ ಸರ್ಕಾರ ದಲಿತರಿಗಾಗಿ ಏನೂ ಮಾಡಿಲ್ಲ: ಬಿಜೆಪಿ ಸಂಸದನಿಂದಲೇ ಗಂಭೀರ ಆರೋಪ

 ಕೇಂದ್ರ ಸರ್ಕಾರ ಕಳೆದ ನಾಲ್ಕು ವರ್ಷಗಳಲ್ಲಿ ದಲಿತರಿಗಾಗಿ ಏನನ್ನೂ ಮಾಡಿಲ್ಲ ಎಂದು ಉತ್ತರ ಪ್ರದೇಶದ ನಗೀನಾ ಕ್ಷೇತ್ರದ ಬಿಜೆಪಿ ಸಂಸದ ಯಶವಂತ್ ಸಿಂಗ್ ಆರೋಪಿಸಿದ್ದಾರೆ. ‘ನಾನು ಸಂಸದನಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಾತ್ರ ನಿಮ್ಮನ್ನು ಭೇಟಿಯಾಗಿದ್ದು, ದಲಿತರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದ ಮಸೂದೆಯನ್ನು ಅಂಗೀಕರಿಸಬೇಕು ಎಂದು ಮನವಿ ಮಾಡಿದ್ದೆ. ವಿವಿಧ ಸಂಘಟನೆಗಳು ಆ ಬಗ್ಗೆ ನಮ್ಮಲ್ಲಿ ಮನವಿ ಮಾಡುತ್ತಲೇ ಇವೆ. ಆದರೆ, ದೇಶದ 30 ಕೋಟಿ ದಲಿತರಿಗೆ ನೆರವಾಗುವ ನಿಟ್ಟಿನಲ್ಲಿ, ನಾಲ್ಕು ವರ್ಷಗಳ ಅಧಿಕಾರ ಪೂರೈಸಿದ ಹೊರತಾಗಿಯೂ ನಿಮ್ಮ ಸರ್ಕಾರ ಏನೂ ಮಾಡಿಲ್ಲ’ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.     

short by NP / read more at Prajavani

Comments