Skip to main content


ವೋಟರ್ ಐಡಿ ಇಲ್ಲದಿದ್ರೂ ಮತ ಹಾಕಬಹುದು

ಮೇ 12 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ವೋಟರ್ ಐಡಿ ಇಲ್ಲದಿದ್ರೂ ನೀವು ಮತ ಹಾಕಬಹುದು. ಆದರೆ, ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇರಬೇಕು. ವಿಧಾನಸಭೆ ಚುನಾವಣೆಗೆ ಕೈಗೊಂಡಿರುವ ಸಿದ್ಧತೆ ಮತ್ತಿತರ ವಿಷಯಗಳ ಕುರಿತಾಗಿ ಸುದ್ದಿಗೋಷ್ಠಿಯಲ್ಲಿ ಇಂದು ಮಾಹಿತಿ ನೀಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್, ಮತದಾನದ ದಿನದಂದು ಚುನಾವಣಾ ಗುರುತಿನ ಚೀಟಿ ಕಡ್ಡಾಯವಾಗಿದೆ ಎಂದು ತಿಳಿಸಿದ್ದಾರೆ. ಪಾಸ್ ಪೋರ್ಟ್, ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್, ಕೇಂದ್ರ ಅಥವಾ ರಾಜ್ಯ ಸರ್ಕಾರದ, ಅರೆ ಸರ್ಕಾರಿ/ ಸಾರ್ವಜನಿಕ ಸ್ವಾಮ್ಯದ ಕಂಪನಿಗಳು ತಮ್ಮ ಸಿಬ್ಬಂದಿಗೆ ನೀಡಿದ ಫೋಟೋ ಗುರುತಿನ ಚೀಟಿ, ಭಾವಚಿತ್ರವಿರುವ ಬ್ಯಾಂಕ್, ಪೋಸ್ಟ್ ಆಫೀಸ್ ಪಾಸ್ ಬುಕ್, ಎಂ ನರೇಗಾ ಜಾಬ್ ಕಾರ್ಡ್ ಇವೇ ಮೊದಲಾದ 12 ಅಧಿಕೃತ ಗುರುತಿನ ಚೀಟಿಗಳನ್ನು ತೋರಿಸಿ ಮತದಾನ ಮಾಡಬಹುದಾಗಿದೆ.   

short by Pawan / more at Kannadadunia

Comments