Skip to main content


ಡೊನಾಲ್ಡ್ ಟ್ರಂಪ್ ಟವರ್ ನಲ್ಲಿ ಅಗ್ನಿ ಅನಾಹುತ: ಓರ್ವ ಮೃತ್ಯು, ನಾಲ್ವರಿಗೆ ಗಾಯ!

ಅಮೆರಿಕಾದ ನ್ಯೂಯಾರ್ಕ್ ನಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಸೇರಿದ ಟ್ರಂಪ್ ಟವರ್ ನಲ್ಲಿ ಅಗ್ನಿ ಅನಾಹುತ ಸಂಭವಿಸಿದೆ ಎಂದು ತಿಳಿದು ಬಂದಿದೆ. ನ್ಯೂಯಾರ್ಕ್ ನಲ್ಲಿರುವ ಬಹು ಅಂತಸ್ತಿನ ಟ್ರಂಪ್ ಟವರ್ ನ 50 ನೇ ಮಹಡಿಯಲ್ಲಿ ಅಗ್ನಿ ಅನಾಹುತ ನಡೆದಿದೆ. ಘಟನೆಯಲ್ಲಿ ಐದು ಮಂದಿ ಗಾಯಗೊಂಡಿದ್ದು, ಅದರಲ್ಲಿ ಓರ್ವ ವ್ಯಕ್ತಿಯ ಪರಿಸ್ಥಿತಿ ಗಂಭೀರವಾಗಿತ್ತು. ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.           

short by Pawan / read more at News Kannada

Comments