Skip to main content


ಬಿಜೆಪಿಯಲ್ಲಿ ಭುಗಿಲೆದ್ದ ಆಕ್ರೋಶ

ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ 72 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ ಎದ್ದಿದೆ. ಪಕ್ಷದ 40 ಹಾಲಿ ಶಾಸಕರಿಗೆ ಹಾಗೂ ಇಬ್ಬರು ಸಂಸದರಿಗೆ ಟಿಕೆಟ್‌ ನೀಡಲಾಗಿದೆ. ಶಿಕಾರಿಪುರದಲ್ಲಿ ಬಿ.ವೈ.ರಾಘವೇಂದ್ರ ಬದಲು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ಬಿ.ಎಸ್‌.ಯಡಿಯೂರಪ್ಪ, ಮೊಳಕಾಲ್ಮುರಿನಲ್ಲಿ ಎಸ್.ತಿಪ್ಪೇಸ್ವಾಮಿ ಬದಲು ಬಿ.ಶ್ರೀರಾಮುಲು ಕಣಕ್ಕಿಳಿಯಲಿದ್ದಾರೆ. ‘ಪಕ್ಷ ನಡೆಸಿದ ಆಂತರಿಕ ಸಮೀಕ್ಷೆಯಲ್ಲಿ ಬೋಪಯ್ಯ ಗೆಲ್ಲುವುದು ಕಷ್ಟ ಎಂಬ ಮಾಹಿತಿ ಬಂದಿದೆ. ಹೀಗಾಗಿ, ವಿರಾಜಪೇಟೆಯಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎಂಬ ಬಗ್ಗೆ ಮೊದಲ ಪಟ್ಟಿಯನ್ನು ಆಖೈರುಗೊಳಿಸುವಾಗ ವರಿಷ್ಠರು ಯಾವುದೇ ತೀರ್ಮಾನ ಕೈಗೊಂಡಿಲ್ಲ’ ಎಂದು ಪಕ್ಷದ ಮೂಲಗಳು ತಿಳಿಸಿವೆ.         

short by NP / read more at Prajavani

Comments