Skip to main content


ಯಡಿಯೂರಪ್ಪ ಪುತ್ರ ವಿಜಯೇಂದ್ರನಿಗೆ ರಾಜಕೀಯವಾಗಿ ತಲೆ ಬಲಿತಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪುತ್ರ ವಿಜಯೇಂದ್ರನಿಗೆ ಇನ್ನೂ ರಾಜಕೀಯವಾಗಿ ತಲೆ ಬಲಿತಿಲ್ಲ. ಹಾಗಾಗಿ ಏನೇನೊ ಹೇಳುತ್ತಿದ್ದಾನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು. ವರುಣಾ ಕ್ಷೇತ್ರದಲ್ಲಿ ಅಭಿವೃದ್ಧಿಯೇ ಆಗಿಲ್ಲ ಎಂಬ ವೀಡೀಯೋವನ್ನು ವಿಜಯೇಂದ್ರ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಮಾಡಿದ್ದಾರಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅಯ್ಯೋ. ಇನ್ನೂ ಆ ಹುಡುಗನಿಗೆ ರಾಜಕೀಯವಾಗಿ ತಲೆ ಬಲಿತಿಲ್ಲ. ಹಾಗಾಗಿ ಏನೇನೋ ಮಾತಾಡುತ್ತಿದ್ದಾನೆ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹಕ್ಕಿದೆ. ಮಾಡಲಿ ಬಿಡಿ ಎಂದರು. ಸಚಿವರಾದ ಡಿ.ಕೆ.ಶಿವಕುಮಾರ್, ಡಾ.ಗೀತಾ ಮಹದೇವಪ್ರಸಾದ್, ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಮಾನಸ, ಮೈಲ್ಯಾಕ್ ಅಧ್ಯಕ್ಷ ಎಚ್.ಎ.ವೆಂಕಟೇಶ್, ಕಾಂಗ್ರೆಸ್ ಮುಖಂಡ ಕೆ.ಎಸ್.ಶಿವರಾಮ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

short by Shraman Jain / more at Vartha Bharathi


Comments