Skip to main content


ತವರಿನಲ್ಲಿ ಸಿಎಸ್‌ಕೆಗೆ ಗೆಲ್ಲುವ ಹಂಬಲ

ಚೆನ್ನೈ ಸೂಪರ್ ಕಿಂಗ್ಸ್‌ ತಂಡ ಐಪಿಎಲ್‌ನ ತನ್ನ ಎರಡನೇ ಪಂದ್ಯದಲ್ಲಿ ಮಂಗಳವಾರ ಕಣಕ್ಕೆ ಇಳಿಯಲಿದೆ. ಇಲ್ಲಿನ ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯದಲ್ಲಿ ಈ ತಂಡ ಕೋಲ್ಕತ್ತ ನೈಟ್‌ ರೈಡರ್ಸ್‌ನ ಸವಾಲು ಎದುರಿಸಲಿದೆ. ನಿಷೇಧಕ್ಕೆ ಒಳಗಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್‌ ಎರಡು ವರ್ಷಗಳ ನಂತರ ಮೊದಲ ಬಾರಿ ತವರಿನ ಪ್ರೇಕ್ಷಕರ ಮುಂದೆ ಆಡಲಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿರುವ ಮಹೇಂದ್ರ ಸಿಂಗ್ ದೋನಿ ಬಳಗದವರು ಮತ್ತೊಂದು ಜಯದ ಭರವಸೆಯಲ್ಲಿದ್ದಾರೆ. ಮುಂಬೈ ಇಂಡಿಯನ್ಸ್ ವಿರುದ್ಧ ಮಿಂಚಿದ್ದ ಡ್ರೇನ್ ಬ್ರಾವೊ ಮತ್ತು ಅಂಬಟಿ ರಾಯುಡು ಮೇಲೆ ತಂಡ ಭರವಸೆ ಹೊಂದಿದೆ. ಮಹೇಂದ್ರ ಸಿಂಗ್ ದೋನಿ ಲಯ ಕಂಡುಕೊಳ್ಳುವ ನಿರೀಕ್ಷೆಯಲ್ಲಿದ್ದಾರೆ. ಮೊದಲ ಪಂದ್ಯದಲ್ಲಿ ಕಣಕ್ಕೆ ಇಳಿಯದೇ ಇದ್ದ ಮುರಳಿ ವಿಜಯ್‌ ಇಲ್ಲಿ ಅಂತಿಮ 11ರಲ್ಲಿ ಸ್ಥಾನ ಗಳಿಸುವ ನಿರೀಕ್ಷೆ ಇದೆ.                     

Short by Prajwal / read more at Prajavani

Comments