Skip to main content


ಸುಪ್ರೀಂ ಕೋರ್ಟ್ ನ್ಯಾಯಾಧೀಶೆಯಾಗಲಿರುವ ಮೊದಲ ಮಹಿಳಾ ವಕೀಲೆ ಇಂದು ಮಲ್ಹೋತ್ರಾ

ಮಹತ್ವದ ಬೆಳವಣಿಗೆಯೊಂದರಲ್ಲಿ ಹಿರಿಯ ವಕೀಲೆ ಇಂದು ಮಲ್ಹೋತ್ರಾ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಾಧೀಶೆಯಾಗಿ ನೇಮಕಾತಿಗೊಳಿಸುವ ನಿಟ್ಟಿನಲ್ಲಿ ಕೊಲಿಜಿಯಂ ನೀಡಿದ್ದ ಶಿಫಾರಸನ್ನು ಕೇಂದ್ರ ಸರಕಾರ ಕೊನೆಗೂ ಒಪ್ಪಿದೆ. ದೇಶದ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಸುಪ್ರೀಂ ಕೋರ್ಟ್ ವಕೀಲೆಯೊಬ್ಬರನ್ನು  ಸುಪ್ರೀಂ ಕೋರ್ಟ್ ನ್ಯಾಯಾಧೀಶೆಯಾಗಿ ನೇಮಕಗೊಳಿಸಲಾಗಿದ್ದು, ಅವರು ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮಲ್ಹೋತ್ರ ಅವರ ಹೆಸರಿನ ಜತೆಗೆ ಉತ್ತರಾಖಂಡ ಮುಖ್ಯ ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ಅವರ ಹೆಸರನ್ನೂ ಸುಪ್ರೀಂ ಕೋರ್ಟ್  ನ್ಯಾಯಾಧೀಶ ಹುದ್ದೆಗೆ ಶಿಫಾರಸು ಮಾಡಲಾಗಿತ್ತಾದರೂ ಈ ನಿಟ್ಟಿನಲ್ಲಿ ಕೇಂದ್ರ ತನ್ನ ಅನುಮೋದನೆ ಇನ್ನಷ್ಟೇ ನೀಡಬೇಕಿದೆ.   

short by Pawan / more at Varthabharathi

Comments