Skip to main content


ಕಾಂಗ್ರೆಸ್‌ ಬೆಂಬಲಕ್ಕೆ ನಿಂತ ಸ್ವಾಮೀಜಿಗಳು

ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ಬೆಂಬಲ ನೀಡಲು ಲಿಂಗಾಯತ ಮಠಾಧೀಶರು ನಿರ್ಧರಿಸಿದ್ದಾರೆ. ‘ಲಿಂಗಾಯತ ಮಠಾಧಿಪತಿಗಳ ವೇದಿಕೆ’ಯು ಬಸವ ಸದನದಲ್ಲಿ ಶನಿವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಸ್ವಾಮೀಜಿಗಳು ತಮ್ಮ ನಿರ್ಧಾರ ಪ್ರಕಟಿಸಿದರು. ‘ಎಲ್ಲ ಲಿಂಗಾಯತರೂ ಕಾಂಗ್ರೆಸ್‌ಗೇ ಮತ ಚಲಾಯಿಸಬೇಕು’ ಎಂದು ಬಸವ ಧರ್ಮ ಪೀಠದ ಮಾತೆ ಮಹಾದೇವಿ ಬಹಿರಂಗವಾಗಿ ಕರೆ ನೀಡಿದರೆ, ಇತರೆ ಸ್ವಾಮೀಜಿಗಳೂ ಪರೋಕ್ಷವಾಗಿ ಬೆಂಬಲ ಸೂಚಿಸಿದರು.        

short by NP / read more at Prajavani