Skip to main content


ಕಾಮನ್ ವೆಲ್ತ್ ಗೇಮ್ ನಲ್ಲಿ ಪದಕ ಗೆದ್ದ ಗುರುರಾಜ್ ಗೆ ಬಂಪರ್ ಆಫರ್

ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆದ 21 ನೇ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಉಡುಪಿ ಜಿಲ್ಲೆ ಕುಂದಾಪುರದ ಗುರುರಾಜ್ ಪೂಜಾರಿ ಬೆಳ್ಳಿ ಪದಕವನ್ನು ಗಳಿಸಿದ್ದಾರೆ. ಅವರ ಸಾಧನೆಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ. ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಕೂಡ ಅಭಿನಂದನೆ ಸಲ್ಲಿಸಿದ್ದಾರೆ. ಇತ್ತೀಚೆಗಷ್ಟೇ ಗುರುರಾಜ್ ಅವರಿಗೆ ಏಕಲವ್ಯ ಪ್ರಶಸ್ತಿ ನೀಡಿದ್ದನ್ನು ಸ್ಮರಿಸಿದ ಸಚಿವರು, ಕಾಮನ್ ವೆಲ್ತ್ ಗೇಮ್ ನಲ್ಲಿ ಪದಕ ಗೆದ್ದಿರುವ ಗುರುರಾಜ್ ಅವರಿಗೆ ಸರ್ಕಾರದ ಬಿ ಗ್ರೂಪ್ ಉದ್ಯೋಗದ ಜೊತೆಗೆ 25 ಲಕ್ಷ ರೂ. ಬಹುಮಾನ ಸಿಗಲಿದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕ್ರೀಡಾನೀತಿ ಘೋಷಣೆಯಾಗಿದ್ದು, ಇದರ ಅನ್ವಯ ಸರ್ಕಾರದ ನೇಮಕಾತಿಯಲ್ಲಿ ಮೀಸಲಾತಿ ಇದೆ.              

Short by Prajwal / read more at kannadadunia

Comments