Skip to main content


ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ನಾಲ್ಕಂತಸ್ತಿನ ಕಟ್ಟಡದಿಂದ ಜಿಗಿದ ಅಪ್ರಾಪ್ತೆ 

ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಅಪ್ರಾಪ್ತ ಬಾಲಕಿಯೊಬ್ಬಳು ಮಹಡಿಯಿಂದ ಕೆಳಗೆ ಧುಮುಕಿರುವ ಆಘಾತಕಾರಿ ಘಟನೆ ನಗರದಲ್ಲಿ ನಡೆದಿದೆ. ಮಹಡಿಯಿಂದ ಕೆಳಕ್ಕೆ ಜಿಗಿದ ಪರಿಣಾಮ ಬಾಲಕಿಗೆ ಗಂಭೀರ ಗಾಯಗಳಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿಯಲ್ಲಿ ಈ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಆರೋಪಿ ಪತ್ತೆಗೆ ಹುಡುಕಾಟ ಆರಂಭಿಸಿದ್ದಾರೆ. ಅಲ್ಲದೇ ಘಟನೆ ನಡೆದ ಪ್ರದೇಶದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸುತ್ತಿರುವುದಾಗಿ ಇನ್ಸ್ ಪೆಕ್ಟರ್ ಹೇಳಿದ್ದಾರೆ.   
     
short by NP / read more at Public TV