Skip to main content


ಗಂಡು ಮಕ್ಕಳನ್ನು ಜವಾಬ್ದಾರಿಯುತರನ್ನಾಗಿ ಬೆಳೆಸಿ: ಪಾಲಕರಿಗೆ ಮೋದಿ ಕರೆ

ಮಧ್ಯಪ್ರದೇಶದ ಮಾಂಡ್ಲದಲ್ಲಿ ರಾಷ್ಟ್ರೀಯ ಪಂಚಾಯತ್‌ ರಾಜ್‌ ಸಮ್ಮೇಳನ ಉದ್ದೇಶಿಸಿ ಭಾಷಣ ಮಾಡಿದ ಮೋದಿ, ದೇಶದ ಎಲ್ಲ ತಂದೆ-ತಾಯಂದಿರು ತಮ್ಮ ಗಂಡು ಮಕ್ಕಳನ್ನು ಹೆಚ್ಚು ಜವಾಬ್ದಾರಿಯುತರನ್ನಾಗಿ ಬೆಳಸಬೇಕು ಎಂದು ತಿಳಿಸಿದ್ದಾರೆ. ಮಹಿಳೆಯರು ಮತ್ತು ಬಾಲಕಿಯರ ಮತ್ತು ಮಕ್ಕಳ ಸುರಕ್ಷತೆ ಹೆಚ್ಚಿಸುವುದು ಸಾಮಾಜಿಕ ಆಂದೋಲನವಾಗಬೇಕು. ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಸುಗ್ರೀವಾಜ್ಞೆಗೆ ಅನುಮೋದನೆ ಪಡೆಯಲಾಗಿದೆ ಎಂದರು. ಹೆಣ್ಣು ಮಕ್ಕಳಿಗೆ ಗೌರವ ನೀಡುವುದನ್ನು ನಮ್ಮ ಮನೆಯ ಮಕ್ಕಳಿಗೆ ಕಲಿಸಿದರೆ ಅದರಿಂದ ಬಹುತೇಕ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ಮೋದಿ ಹೇಳಿದರು. 

short by Shraman / more at Vijaya Karnataka


Comments