Skip to main content


ತಾಳಿ ಕಟ್ಟಿದ ಗಂಡನನ್ನೇ ಚೂರಿಯಿಂದ ಇರಿದು ಬರ್ಬರವಾಗಿ ಕೊಲೆಗೈದ್ಳಾ ಪತ್ನಿ?

ಪತಿ ಹಾಗೂ ಪತ್ನಿ ನಡುವೆ ನಡೆದ ಜಗಳದಲ್ಲಿ ಪತಿಯೊರ್ವ ಬರ್ಬರವಾಗಿ ಕೊಲೆಗೀಡಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಂಜಿ ರಸ್ತೆಯ 8 ನೇ ವಾರ್ಡ್ ನಲ್ಲಿ ಈ ಘಟನೆ ನಡೆದಿದ್ದು, ಮನೆಯ ಪಕ್ಕದಲ್ಲಿ ಛಾಯಾಕುಮಾರ್ (30) ಎಂಬಾತನ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯ ಬಟ್ಟೆ ಹರಿದಿದ್ದು, ಕುತ್ತಿಗೆಗೆ ಚಾಕುವಿನಿಂದ ಇರಿಯಲಾಗಿದೆ. ಅಲ್ಲದೇ ದೇಹವೆಲ್ಲಾ ರಕ್ತದಿಂದ ಕೂಡಿದೆ. ಹೀಗಾಗಿ ಗಲಾಟೆ ನಡೆದ ಕೊಲೆಯಾಗಿರೋದು ದೃಢವಾಗಿದೆ.      
 
short by NP / read more at Public TV