Skip to main content


ಶಿವಮೊಗ್ಗಕ್ಕೆ ರಾಹುಲ್ ಗಾಂಧಿ: ಬಿಎಸ್‌ವೈ ತವರು ಜಿಲ್ಲೆಯಲ್ಲಿ ಯಾತ್ರೆ

ಅಂತಿಮ ಹಂತದ ಜನಾಶೀರ್ವಾದ ಯಾತ್ರೆ ಸಲುವಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಿದರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರ ತವರು ಜಿಲ್ಲೆಯಲ್ಲಿ ಯಾತ್ರೆ ಕೈಗೊಳ್ಳಲಿರುವ ರಾಹುಲ್ ಮಂಗಳವಾರ ಶಿವಮೊಗ್ಗ ಪ್ರವಾಸಿ ಮಂದಿರದ ಹೆಲಿಪ್ಯಾಡ್‌ಗೆ ಬಂದಿಳಿದಿದ್ದಾರೆ. ಅವರು ಇಲ್ಲಿನ ಗೋಪಿ ವೃತ್ತದಲ್ಲಿ ರೋಡ್‌ ಶೋ ನಡೆಸಲಿದ್ದಾರೆ. ಈ ಮಧ್ಯೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಪ್ರತ್ಯೇಕ ಹೆಲಿಕಾಪ್ಟರ್‌ನಲ್ಲಿ ಬಂದಿಳಿದಿದ್ದು, ಪಕ್ಷದ ಅಧ್ಯಕ್ಷರಿಗೆ ಸಾಥ್ ನೀಡಲಿದ್ದಾರೆ.        

short by NP / read more at Prajavani

Comments