Skip to main content


ಪ್ರಧಾನಿ ನಿವಾಸದ ಎದುರು ಪ್ರತಿಭಟನೆ ನಡೆಸುತ್ತಿದ್ದ ಟಿಡಿಪಿ ಸಂಸದರು ಪೊಲೀಸ್ ವಶಕ್ಕೆ

ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಎದುರು ಪ್ರತಿಭಟನೆ ನಡೆಸುತ್ತಿರುವ ತೆಲುಗುದೇಶಂ ಪಕ್ಷದ (ಟಿಡಿಪಿ) ಸಂಸದರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಟಿಡಿಪಿ ಸಂಸದರು ಇಲ್ಲಿನ ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿಯವರ ನಿವಾಸದ ಮುಂದೆ ಪ್ರತಿಭಟನೆ ನಡೆಸುತ್ತಿದ್ದರು. ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ವಿಚಾರದಲ್ಲಿ ಕಳೆದ ವಾರವಿಡೀ ಲೋಕಸಭೆಯಲ್ಲಿ ಗದ್ದಲ ಸೃಷ್ಟಿಯಾಗಿದ್ದು, ಹಲವು ಬಾರಿ ಕಲಾಪ ಮುಂದೂಡಲಾಗಿತ್ತು.        

short by NP / read more at Prajavani

Comments