Skip to main content


ಕಾವೇರಿ ಗಲಾಟೆ: ಐಪಿಎಲ್ ಪಂದ್ಯಗಳು ಚೆನ್ನೈನಿಂದ ಬೇರಡೆಗೆ ಸ್ಥಳಾಂತರ?

ಕಾವೇರಿ ನೀರು ವಿವಾದಕ್ಕೆ ಸಂಬಂಧಿಸಿ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈಗ ನಡೆಯುತ್ತಿರುವ ಐಪಿಎಲ್ ಟೂರ್ನಿಯ ವೇಳೆ ಚೆನ್ನೈನಲ್ಲಿ ನಡೆಯಲಿರುವ ಪಂದ್ಯಗಳು ಬೇರೆಡೆಗೆ ಸ್ಥಳಾಂತರವಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಚೆನ್ನೈ ಸೂಪರ್ ಕಿಂಗ್ಸ್ ತವರು ಮೈದಾನದಲ್ಲಿ ಆಡಲಿರುವ ಇನ್ನುಳಿದ ಏಳು ಪಂದ್ಯಗಳನ್ನು ಆಡಲು ಕೊಚ್ಚಿ, ತಿರುವನಂತಪುರ, ವಿಝಾಗ್ ಹಾಗೂ ಹೈದರಾಬಾದ್ ನಗರಗಳ ಪೈಕಿ ಯಾವುದಾದರೂ ಒಂದನ್ನು ಆಯ್ಕೆ ಮಾಡುವಂತೆ ಬಿಸಿಸಿಐ ಚೆನ್ನೈ ತಂಡಕ್ಕೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.ರಾಜ್ಯ ಸರಕಾರವನ್ನು ಸಂಪರ್ಕಿಸಲು ನಿರ್ಧರಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇನ್ನುಳಿದ ಪಂದ್ಯಗಳಿಗೆ ಬಿಗಿ ಭದ್ರತೆ ನೀಡುವಂತೆ ಕೇಳಿಕೊಳ್ಳಲು ನಿರ್ಧರಿಸಿದೆ. ನಾವು ಎಲ್ಲ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಿದ ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸಿಎಸ್‌ಕೆ ಅಧಿಕಾರಿಗಳು ತಿಳಿಸಿದ್ದಾರೆ.               

short by Prajwal / read more at Varthabharathi

Comments