Skip to main content


ಪ್ರಿಯಕರನೊಂದಿಗೆ ಸೇರಿ ಪತಿಗೇನು ಮಾಡಿದ್ದಾಳೆ ನೋಡಿ

ಅನೈತಿಕ ಸಂಬಂಧ ಹೊಂದಿದ್ದ ಮಹಿಳೆ, ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಚಿಕ್ಕಬಳ್ಳಾಪುರ 8 ನೇ ವಾರ್ಡ್ ನಿವಾಸಿ ಛಾಯಕುಮಾರ್ ಕೊಲೆಯಾದ ವ್ಯಕ್ತಿ. ಛಾಯಕುಮಾರ್ ಗೆ ಮದುವೆಯಾಗಿ 4 ವರ್ಷಗಳಾಗಿದ್ದು, 1 ಮಗುವಿದೆ. ಮದ್ಯ ವ್ಯಸನಿಯಾಗಿದ್ದ ಆತ ಪತ್ನಿಗೆ ಕಿರುಕುಳ ನೀಡುತ್ತಿದ್ದನೆನ್ನಲಾಗಿದೆ. ಈ ನಡುವೆ ಬೇರೆ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧ ಬೆಳೆಸಿದ ಆತನ ಪತ್ನಿ, ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆ ಮಾಡಿದ್ದಾಳೆ. ಮೊದಲಿಗೆ ತನಗೆ ಏನೂ ಗೊತ್ತಿಲ್ಲವೆಂದು ಹೇಳಿದ್ದ ಆಕೆ, ವಿಚಾರಣೆ ಸಂದರ್ಭದಲ್ಲಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ. ಪೊಲೀಸರು ಮಹಿಳೆ ಹಾಗೂ ಆಕೆಯ ಪ್ರಿಯಕರನ್ನು ಬಂಧಿಸಿದ್ದಾರೆ.      

short by Pawan / read more at Kannadadunia

Comments