Skip to main content


ಪೆಟ್ರೋಲ್‌, ಡೀಸೆಲ್‌ ದರ ಇಳಿಕೆ ಇಲ್ಲ?

ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಲು ಹಣಕಾಸು ಸಚಿವಾಲಯ ಒಲವು ಹೊಂದಿಲ್ಲ ಎಂದು ತಿಳಿದುಬಂದಿದೆ. ತೈಲ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಳಿದಿದ್ದರೂ, ದೇಶದಲ್ಲಿ ಮಾತ್ರ ಭಾರೀ ಏರಿಕೆ ಕಂಡಿದ್ದು, ಏರಿದಾಗ ವಿಧಿಸಲಾಗಿದ್ದ ಅಬಕಾರಿ ಸುಂಕವನ್ನು ಕಡಿಮೆ ಮಾಡುವ ಸಾಧ್ಯತೆಗಳಿಲ್ಲ. ಅಷ್ಟೇ ಅಲ್ಲ, ರಾಜ್ಯಗಳೇ ಮಾರಾಟ ತೆರಿಗೆ ಅಥವಾ ವ್ಯಾಟ್‌ ಕಡಿಮೆ ಮಾಡಲಿ ಎಂಬ ಅಭಿಪ್ರಾಯವನ್ನು ಕೇಂದ್ರ ಸರಕಾರ ಹೊಂದಿದೆ ಎಂದು ಹೇಳಲಾಗಿದೆ. ಪೆಟ್ರೋಲ್‌ ಬೆಲೆ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಕಳೆದ ನಾಲ್ಕು ತಿಂಗಳಲ್ಲೇ ಅತಿ ಹೆಚ್ಚಾಗಿದೆ. ವಿತ್ತೀಯ ಕೊರತೆಯನ್ನು ಕಡಿಮೆ ಮಾಡುವುದರ ಮೇಲೆ ಹೆಚ್ಚಿನ ಗಮನಹರಿಸಿರುವುದರಿಂದ, ಅಬಕಾರಿ ಸುಂಕ ಕಡಿಮೆ ಮಾಡುತ್ತಿಲ್ಲ. ಬೆಲೆ ಕಡಿಮೆ ಮಾಡುವುದರಿಂದ ರಾಜಕೀಯವಾಗಿ ಅನುಕೂಲವಾಗುತ್ತದೆ. ಆದರೆ ಆರ್ಥಿಕ ಸ್ಥಿತಿ ಹದಗೆಡುತ್ತದೆ ಎಂದು ಹೇಳಲಾಗಿದೆ.   

short by Pawan / more at Udayavani

Comments